ಜಿಲ್ಲೆ

ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಗುಂಡ್ಲುಪೇಟೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿಗೆ ಒಂದು ವರ್ಷದ ಟೂಲ್ ರೂಮ್ ಮಷಿನಿಷ್ಟ್ (ಟಿ.ಆರ್.ಎಂ) ಹಾಗೂ ಎರಡು ತಿಂಗಳ ಅವಧಿಯ ಸಿಎನ್‌ಸಿ ಆಪರೇಟರ್, ಟರ್ನರ್, ಮಿಲ್ಲರ್, ಗ್ರೆಬಂಡರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಡಿಪ್ಲೊಮಾ, ಐಟಿಐ, ಬಿಇ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತ ಕೌಶಲ ತರಬೇತಿ ನೀಡಲಾಗುವುದು. ಟೂಲ್ ರೂಮ್ ಮಷಿನಿಷ್ಟ್ ತರಬೇತಿ ಪಡೆಯುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ 30 ಸಾವಿರ ರೂ. ಶಿಷ್ಯವೇತನ ನೀಡಲಾಗುವುದು. ಉಳಿದ ಜನಾಂಗದ ಅಭ್ಯರ್ಥಿಗಳಿಗೂ ವಿಶೇಷ ಸೌಲಭ್ಯ ಕಲ್ಪಿಸಲಾಗುವುದು. ಅಭ್ಯರ್ಥಿಗಳು 16 ರಿಂದ 35ರ ವಯೋಮಿತಿಯಲ್ಲಿರಬೇಕು. ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9164261642/ 9916188127 ಸಂಪರ್ಕಿಸುವಂತೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.