ಜಿಲ್ಲೆ

ನೇರ ಪ್ರವೇಶಾತಿ

ಚಾಮರಾಜನಗರ: ಗುಂಡ್ಲುಪೇಟೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈಮೇಕಿಂಗ್ (ಡಿ.ಟಿ.ಡಿ.ಎಂ) ಕೋರ್ಸ್‌ನ ದ್ವಿತೀಯ ವರ್ಷಕ್ಕೆ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿ.ಯು.ಸಿ.ಯಲ್ಲಿ ವಿಜ್ಞಾನ ಮತ್ತು ಐ.ಟಿ.ಐ.ನಲ್ಲಿ ಮೆಕಾನಿಕಲ್ ವಿಭಾಗದ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು 2023-24ನೇ ಸಾಲಿಗೆ ದ್ವಿತೀಯ ವರ್ಷಕ್ಕೆ ನೇರ ಪ್ರವೇಶಾತಿ ಪಡೆಯಬಹುದು. ಆಸಕ್ತ ವಿದ್ಯಾರ್ಥಿಗಳು ಗುಂಡ್ಲುಪೇಟೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅರ್ಜಿ ಪಡೆದು ಜು. 21ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗುಂಡ್ಲುಪೇಟೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರ ಮೊ.8147384716 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.