ಜಿಲ್ಲೆ

4ರಂದು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.4ರಂದು ಶಾಲಾ ಮಕ್ಕಳಿಗೆ ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಪ್ರಬಂಧ ಸ್ಪರ್ಧೆಯನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30 ಗಂಟೆಗೆ ಕಿರಿಯ, ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಹಾಗೂ ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಪ್ರೌಢಶಾಲಾ ಮಕ್ಕಳಿಗೆ ಪರಿಸರ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಪರಿಸರ ಅಧಿಕಾರಿ ಪಿ.ಕೆ ಉಮಾಶಂಕರ್ (ಮೊ.ಸಂ-9448160267), ಉಪ ಪರಿಸರ ಅಧಿಕಾರಿ ಡಾ. ಎಂ. ಶೃತಿ (ಮೊ.ಸಂ-9986729289), ಕಚೇರಿ (ದೂ.ಸಂ-08226-223846) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ (ಬಿ.ಇ.ಒ) ಅವರನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಪಿ.ಕೆ.ಉಮಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.