ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 2 ವರ್ಷ ಅವಧಿಯ ಎಲೆಕ್ಟ್ರೀಷಿಯನ್ ಹಾಗೂ ಫಿಟ್ಟರ್ ಕೋರ್ಸ್‌ಗಳು ಲಭ್ಯವಿದ್ದು, ವೆಬ್‌ಸೈಟ್ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಜೂ.3 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9448322941, 9110607107 ಅಥವಾ ತೆರಕಣಾಂಬಿಯ ಬೊಮ್ಮಲಾಪುರ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ ಬಳಿಯಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.