ಜಿಲ್ಲೆ

ಕಾರಿಗೆ ಬೈಕ್ ಡಿಕ್ಕಿಯಾಗಿ ಸವಾರನಿಗೆ ಗಾಯ

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ಕಾರಿಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ತೀವ್ರ ಗಾಯಗೊಂಡಿದ್ದಾನೆ. ಸೇಲಂನಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ವಿನೀತ್(35) ಸೋಮವಾರ ಬೈಕ್‌ನಲ್ಲಿ ಊರಿಗೆ ತೆರಳುತ್ತಿದ್ದರು. ತ್ರಿಯಂಭಕಪುರ ಗೇಟ್ ಸಮೀಪ ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.