ಚಾಮರಾಜನಗರ: ಚಾಮರಾಜನಗರ ಲೋಕಸಭೆ ಚುನಾವಣೆಯಲ್ಲಿ 8094 ನೋಟಾಗೆ ಮತಗಳು ಹೋಗಿವೆ. ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ನೋಟಾಗೆ 862 ಮತ ಚಲಾವಣೆಯಾಗಿದೆ.
ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ 1064 ಮತ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 1065 ಮತ, ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 968 ಮತ, ಹನೂರು ವಿಧಾನಸಭಾ ಕ್ಷೇತ್ರದಲ್ಲಿ 1032 ಮತ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 1179 ಮತ, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 953 ಮತ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 971 ಮತಗಳನ್ನು ನೋಟಾಗೆ ಚಲಾವಣೆಯಾಗಿದೆ. ಒಟ್ಟಾರೆ 8094 ಮತಗಳನ್ನು ನೋಟಾಗೆ ಚಲಾವಣೆ ಮಾಡಿದ್ದಾರೆ.