ಜಿಲ್ಲೆ

ಜೂ. 7ರಂದು ವಿದ್ಯುತ್ ವ್ಯತ್ಯಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹರದನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಜೂ.7ರಂದು ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿವಿಧ ಕಡೆಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಿದ್ದಯ್ಯನಪುರ, ಹೊಂಗಲವಾಡಿ, ಕೋಳಿಪಾಳ್ಯ, ಬಂಧಿಗೌಡನಹಳ್ಳಿ, ಅಟ್ಟುಗೂಳಿಪುರ ಹಾಗೂ ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಬಿಸಿಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ ಮತ್ತು ಕಿಲಿಗೆರೆ, ಮಾದಲವಾಡಿ, ಯನಗುಂಬ, ಯರಗನಹಳ್ಳಿ, ಅಚ್ಚಟ್ಟಿಪುರ, ಯಾನಗಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.