ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಡಿಪ್ಲೊಮಾ ಕಾಲೇಜಿನ (ಜಿ.ಟಿ.ಟಿ.ಸಿ) 2024-25ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್, ಮೆಕಾಟ್ರೋನಿಕ್ಸ್ ಮತ್ತು ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪ್ರಥಮ ವರ್ಷದ ತರಬೇತಿಗೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುಂಡ್ಲುಪೇಟೆ ಪಟ್ಟಣದಲ್ಲಿ 2007 ರಲ್ಲಿ ಫ್ರಾರಂಭವಾದ ತರಬೇತಿ ಕೇಂದ್ರದಲ್ಲಿ ಡಿಪ್ರೋಮಾ ಇನ್ ಟೂಲ್ ಆಂಡ್ ಡೈಮೇಕಿಂಗ್, ಮೆಕಾಟ್ರೋನಿಕ್ಸ್ ಮತ್ತು ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಎಂಬ ದೀರ್ಘಾವಧಿ ಕೋರ್ಸು ಅಧ್ಯಯನಕ್ಕೆ ಅವಕಾಶ ನೀಡಿದ್ದು ಇದುವರೆಗೆ 280 ವಿದ್ಯಾರ್ಥಿಗಳು ತರಬೇತಿ ಪಡೆದು ರಾಷ್ಟ್ರಮಟ್ಟದ ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ನೌಕರಿ ಅವಕಾಶ ಲಭಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08229-222344 ಅಥವಾ ಮೊ.ಸಂ 9663797925, 9164261642, 8861412626 ಅನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ. ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.