ಚಾಮರಾಜನಗರ: ಮೈಸೂರಿನ ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಜೂ.7ರಂದು ಸಂಜೆ 6 ಗಂಟೆಗೆ ಪಾಂಡವಪುರ ತಾಲೂಕು ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಆಯೋಜಿಸಲಾಗಿದೆ.
ಮೈಸೂರಿನ ಇಲವಾಲ ಬಳಿಯಿರುವ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ನುರಿತ ವಿಜ್ಞಾನಿಗಳು, ಗುಣಮಟ್ಟದ ಉತ್ಪಾದನೆಯಲ್ಲಿ ಎದುರಿಸುವ ಹಲವಾರು ಸಮಸ್ಯೆ ಮತ್ತು ಅದರ ಪರಿಹಾರದ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ.
ಚಾಮರಾಜನಗರ ಜಿಲ್ಲೆಯ ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೊಂದಣಿ ಮಾಡಿಸಬಹುದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ನೊಂದಣಿಗಾಗಿ ಮೊ.ಸಂ 7760074936, 7795100993 ಸಂಪರ್ಕಿಸಬಹುದು ಎಂದು ಮೈಸೂರಿನ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.