ಜಿಲ್ಲೆ

ನೀರು ಸರಬರಾಜು ವ್ಯತ್ಯಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಟಿ. ನರಸೀಪುರದಿಂದ ಕಾವೇರಿ ನೀರು ಸರಬರಾಜು ಆಗುವ ಪೈಪು ಕುರುಬೂರು ಬಳಿ ಒಡೆದು ಹೋಗಿ ನೀರು ಪೋಲಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ದುರಸ್ತಿಪಡಿಸಲು ಮೋಟಾರ್ ಸ್ಥಗಿತ ಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಚಾಮರಾಜನಗರ ಪಟ್ಟಣಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಶುಕ್ರವಾರವೂ ಸಮಸ್ಯೆಯಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ಮನವಿ ಮಾಡಿದ್ದಾರೆ.