ಜಿಲ್ಲೆ

ಕಬ್ಬು ಬೆಳೆಗಾರರಿಗೆ ಉಚಿತ ಸೌಲಭ್ಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ಥಾಪಿಸಲಾಗಿರುವ 50 ಮೆಟ್ರಿಕ್ ಟನ್ ಸಾಮರ್ಥ್ಯದ ಎಲೆಕ್ಟ್ರನಿಕ್ ವೇ ಬ್ರಿಡ್ಜ್‌ನಲ್ಲಿ ಮಾರುಕಟ್ಟೆಗೆ ಬರುವ ಕಬ್ಬು ಬೆಳೆಯುವ ರೈತರಿಗೆ ಉಚಿತವಾಗಿ ತೂಕದ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರು ತಮ್ಮ ಹೆಸರು, ಆಧಾರ್ ಸಂಖ್ಯೆ, ವಾಹನ ಸಂಖ್ಯೆ ಮತ್ತು ಪಹಣಿ ದಾಖಲಾತಿಗಳನ್ನು ಒದಗಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೃಷಿ ಉಪತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.