ಜಿಲ್ಲೆ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘಗಳ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಜೂ.28 ರಂದು ಹಮ್ಮಿಕೊಳ್ಳಲಾಗಿದೆ.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೌಕರರ ಸಂಘದ ಸದಸ್ಯರ ಮಕ್ಕಳಿಗೆ ಮತ್ತು ಜಿಲ್ಲೆಯ ವೀರಶೈವ ಲಿಂಗಾಯತ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಆದ್ದರಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವೀರಶೈವ ಲಿಂಗಾಯತ ಸಮಾಜದ ಮಕ್ಕಳು ಅಂಕಪಟ್ಟಿ ಮತ್ತು ಭಾವಚಿತ್ರದ ಸಮೇತ ಅರ್ಜಿಯನ್ನು ಜೂ.20 ರೊಳಗೆ ಮಹಾಮನೆಯ ಕಚೇರಿಗೆ ಅಥವಾ ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘದ ಕಚೇರಿಗೆ ತಲುಪಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಮಹದೇವಸ್ವಾಮಿ-9535819629 ಅಥವಾ ಬಿ.ನಾಗೇಂದ್ರ-9449371029 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.