ಜಿಲ್ಲೆ

ಸಂಪಿಗೆ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ಸ್ವಸಹಾಯ ಸಂಘಗಳ ಸದಸ್ಯರು ಕಾಲಕಾಲಕ್ಕೆ ಜ್ಞಾನವಿಕಾಸ ಕೇಂದ್ರಗಳಲ್ಲಿ ಮಾಹಿತಿ ಪಡೆದು ಉನ್ನತ ಮಟ್ಟದ ಜೀವನ ನಡೆಸಬೇಕು ಎಂದು ಗ್ರಾಮೀಣ ಅಭಿವೃದ್ಧ್ದಿ ಯೋಜನೆಯ ಜ್ಞಾನವಿಕಾಸ ಸಮನ್ವಯಧಿಕಾರಿ ಮಂಜುಳಾ ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕಲಿಗೌಡನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಸಂಪಿಗೆ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನ ವಿಕಾಸ ಕಾರ್ಯಕ್ರಮದ ವಿಚಾರಧಾರೆಯನ್ನು ಸಂಪಿಗೆ ಜ್ಞಾನವಿಕಾಸ ಕೇಂದ್ರದಲ್ಲಿ ಅನುಷ್ಠಾನ ಮಾಡಲಾಗಿದೆ. ಇದರ ಸದಸ್ಯರು ತಮ್ಮ ಕುಟುಂಬಗಳಲ್ಲಿಯೂ ಈ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಉತ್ತಮ ಜೀವನ ನಡೆಸುತ್ತಿದ್ದಾರೆ. ಪ್ರತಿ ತಿಂಗಳು ವಿಷಯಾಧಾರಿತ ವಿಷಯಗಳ ಮಾಹಿತಿಯನ್ನು ಸದಸ್ಯರು ತಿಳಿದುಕೊಂಡು ತಮ್ಮ ಕುಟುಂಬಗಳಲ್ಲಿ ಅನುಷ್ಠಾನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆನಂದಮೂರ್ತಿ, ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ಪುಟ್ಟಮ್ಮ, ವಲಯದ ಮೇಲ್ವಿಚಾರಕ ಕೃಷ್ಣ, ಕೇಂದ್ರದ ಸದಸ್ಯರು ಹಾಜರಿದ್ದರು.