ಜಿಲ್ಲೆ

19ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಜೂ.19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.45ಕ್ಕೆ ಗುಂಡ್ಲುಪೇಟೆಗೆ ಆಗಮಿಸಲಿದ್ದು, 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಕೆ.ಇ.ಬಿ ಆಫೀಸ್ ಎದುರು ಇರುವ ನಂದಿನಿ ಕೆಫೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.