ಚಾಮರಾಜನಗರ: ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ, ರೋಟರಿ ಸಂಸ್ಥೆ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆಯಿಂದ ಜೂ.23ರಂದು ರಾಜ್ಯಮಟ್ಟದ ವಿದ್ಯಾರ್ಥಿ ರತ್ನ ಪ್ರಶಸ್ತಿ ಹಾಗೂ 2024ನೇ ಸಾಲಿನ ರಾಜ್ಯ ಮಟ್ಟದ ಆದರ್ಶ ಮಹಿಳಾ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗಿದೆ.
ನಗರದ ರೋಟರಿ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಬೆಂಗಳೂರು ವಿಕಾಸಸೌಧ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸರಸ್ವತಿ ಉದ್ಘಾಟಿಸುವರು. ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಎಂ.ಆರ್.ಗಂಗಾಧರ್ ಮುಖ್ಯಭಾಷಣ ಮಾಡುವರು.
ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಕರಿಕಲ್ಲು ಮಾಲೀಕರ ಸಂಘದ ಅಧ್ಯಕ್ಷ ಜಿ.ಎಂ.ಹೆಗಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಜೆಎಸ್‌ಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಭಾರತ ಸೇವಾದಳ ಅಧ್ಯಕ್ಷ ರೋಟರಿ ವೆಂಕಟನಾಗಪ್ಪ, ರೋಟರಿ ಸಂಸ್ಥೆ ಅಧ್ಯಕ್ಷ ಸಿ.ಎನ್.ಚಂದ್ರಪ್ರಭ ಜೆನ್ ಹಾಗೂ ಇತರರು ಮುಖ್ಯಅತಿಥಿಗಳಾಗಿ ಭಾಗವಹಿಸುವರು ಎಂದು ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷ ಜಿ. ಬಂಗಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.