ಜಿಲ್ಲೆ

ಅಧ್ಯಕ್ಷರಾಗಿ ಮಹದೇವಸ್ವಾಮಿ ಅವಿರೋಧ ಆಯ್ಕೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಹದೇವಸ್ವಾಮಿ (ಗಜ), ಉಪಾಧ್ಯಕ್ಷರಾಗಿ ಲತಾ ಅವಿರೋಧವಾಗಿ ಆಯ್ಕೆಯಾದರು.

ಗ್ರಾಮದ ಸಂಘದ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಮಹದೇವಸ್ವಾಮಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲತಾ ಅವರಿಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಅಧಿಕಾರಿ ನಾಗೇಶ್ ಅಧ್ಯಕ್ಷರಾಗಿ ಮಹದೇವಸ್ವಾಮಿ, ಉಪಾಧ್ಯಕ್ಷರಾಗಿ ಲತಾ ಅವರನ್ನು ಅವಿರೋಧವಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಅವಿರೋಧವಾಗಿ ನಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಅಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಂಘದ ಎಲ್ಲಾ ಸದಸ್ಯರ ಅಭಿವೃದ್ಧಿಗೆ ಶ್ರಮಿಸುವ ತೆಗೆ ಸರ್ಕಾರ ಮತ್ತು ಎಂಡಿಸಿಸಿ ಬ್ಯಾಂಕಿನಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕೊಡಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು. ಈ ವೇಳೆ ಸಂಘದ ನಿರ್ದೇಶಕರುಗಳು ಹಾಗೂ ಕೊತ್ತಲವಾಡಿ, ಕಟ್ನವಾಡಿ ಗ್ರಾಮಸ್ಥರು ಮತ್ತು ಮುಖಂಡರು ಹಾಜರಿದ್ದರು.