ಚಾಮರಾಜನಗರ: ಸಾರ್ವಜನಿಕರ ಅಹವಾಲು, ಕುಂದು ಕೊರತೆ ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಜೂ.26ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದ ವಾಲ್ಮೀಕಿ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳೊಂದಿಗೆ ಜಿಪಂ ಸಿಇಒ, ಎಸ್ಪಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆ, ಅಹವಾಲು ಸಲ್ಲಿಸಿ ಪರಿಹರಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳುವಂತೆ ತಹಸೀಲ್ದಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.