ಚಾಮರಾಜನಗರ: 2024-25ನೇ ಸಾಲಿಗೆ ಚಾಮರಾಜನಗರ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿರುವ ಶಾಲಾ ಪೂರ್ವ ಸಿದ್ಧತಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಒಬ್ಬ ಫಿಜಿಯೋ ಥೆರಪಿಸ್ಟ್ ಹಾಗೂ ಆಯಾ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಚಾಮರಾಜನಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ (ಬಿಇಒ) ಕಚೇರಿಗೆ 7 ದಿನಗಳೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.