ಜಿಲ್ಲೆ

ಸ್ಥಳೀಯ ಹಂತದಲ್ಲೇ ಬಗೆಹರಿಯದ ಸಮಸ್ಯೆ

ಚಾಮರಾಜನಗರ: ಯಳಂದೂರು ತಾಲೂಕಿನ ಗ್ರಾಮೀಣ ಭಾಗದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಯಳಂದೂರಿನ ಗಂಗವಾಡಿಯ ಲತಾ ಮಹದೇವ್ ದೂರಿದ್ದಾರೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಲ್ಲಿ ಎಷ್ಟರಮಟ್ಟಿಗೆ ಆರೋಗ್ಯ ಸೇವೆ ದೊರೆಯುತ್ತಿದೆ ಎನ್ನುವ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಇದರಿಂದ ಸಣ್ಣ ಪುಟ್ಟ ಸಮಸ್ಯೆಗಳಿಗೂ ತಾಲೂಕು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಸ್ಥಳೀಯ ಹಂತದಲ್ಲಿ ಸೂಕ್ತ ಚಿಕಿತ್ಸೆ, ಔಷಧಗಳ ಲಭ್ಯತೆ ಇಲ್ಲದ ಕಾರಣ ತೊಂದರೆಯಾಗುತ್ತಿದೆ. ಇದನ್ನು ಮೇಲಧಿಕಾರಿಗಳು ಗಮನಿಸಬೇಕು. ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.