ಚಾಮರಾಜನಗರ: ಪ್ರಸಕ್ತ ಸಾಲಿಗೆ ವಿವಿಧ ಕೋರ್ಸ್‌ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು (ಫ್ರೆಶ್) ಸಾಲ ಯೋಜನೆಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್ ಮೂಲಕ ಆಯ್ಕೆಯಾಗುವ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿ.ಇ., ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಜು.7ರೊಳಗೆ ಆನ್‌ಲೈನ್ ಮೂಲಕ ವೆಬ್‌ಸೈಟ್‌ನಲ್ಲಿ ಸಲ್ಲಿಸಿ ನಂತರ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂ 08226-222332, ಮೊ.ಸಂ 8277944210 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.