ಜಿಲ್ಲೆ

ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಸಂತೇಮರಹಳ್ಳಿ-ತಿ.ನರಸೀಪುರ ಮಾರ್ಗದ ಬಸವಟ್ಟಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲೂಕಿನ ಕಮರವಾಡಿ ಗ್ರಾಮದ ಮಹೇಶ್(40) ಮತ್ತು ಕಿಶೋರ್ (48) ಮೃತ ದುರ್ದೈವಿಗಳು. ಚಾಮರಾಜನಗರದಿಂದ ಮೈಸೂರು ಕಡೆಗೆ ಸಾಗುತ್ತಿದ್ದ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.