ಜಿಲ್ಲೆ

ಭ್ರಷ್ಟಾಚಾರ ನಿರ್ಮೂಲನ ಸಂಘಟನೆಗೆ ಪದಾಧಿಕಾರಿಗಳ ನೇಮಕ

ಚಾಮರಾಜನಗರ: ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫ್ರಂಟ್ ಸಂಘಟನೆಯ ಜಿಲ್ಲಾ ಸಮಿತಿ ರಚನೆ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಸೂರ್ಯಕಾಂತ್‌ದೇವ್‌ತಿಳಿಸಿದರು.

ಭ್ರಷ್ಟಾಚಾರ ನಿರ್ಮೂಲನ ಫ್ರಂಟ್ ಸಂಘಟನೆಯ ಜಿಲ್ಲಾಧ್ಯಕ್ಷರನ್ನಾಗಿ ಎಸ್.ಎಂ.ಮಹದೇವಸ್ವಾಮಿ, ಗೌರವಾಧ್ಯಕ್ಷರಾಗಿ ಎಸ್.ಬಿ.ಚಂದ್ರಕಾಂತ್, ಉಪಾಧ್ಯಕ್ಷರಾಗಿ ಬಿ.ರಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಮಂಜು, ಕಾರ್ಯದರ್ಶಿಯಾಗಿ ಸಿ.ಸಂತೋಷ್ ಕುಮಾರ್, ಎಸ್.ಮಹೇಂದ್ರ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಶಿವರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈಗಾಗಲೇ ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲಾ ಸಮಿತಿ ರಚನೆಯಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲಿ ಚಾಮರಾಜನಗರ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಗೋಷ್ಠಿಯಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಎಸ್.ಪ್ರೀತಮ್ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಜರಿದ್ದರು.