ಚಾಮರಾಜನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಅತಿಥಿ ಆಂಗ್ಲ ಭಾಷಾ ಉಪನ್ಯಾಸಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಆಂಗ್ಲ ಭಾಷೆಯಲ್ಲಿ ಎರಡು ವರ್ಷ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಆಯ್ಕೆಯಾಗುವ ಅತಿಥಿ ಉಪನ್ಯಾಸಕರು 2024-25ನೇ ಶೈಕ್ಷಣಿಕ ಸಾಲಿನ ಮುಕ್ತಾಯದವರೆಗೆ ಅಥವಾ ಖಾಯಂ ಉಪನ್ಯಾಸಕರು ನೇಮಕವಾಗುವವರೆಗೆ ಮಾತ್ರ ಇದರಲ್ಲಿ ಯಾವುದೂ ಮೊದಲು ಅಲ್ಲಿಯವರೆಗೆ ಮುಂದುವರಿಸಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಅರ್ಜಿಗಳನ್ನು ಸಂಪೂರ್ಣ ದಾಖಲೆಗಳೊಂದಿಗೆ ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಮೊ.ಸಂ 9964346118), ಚಾಮರಾಜನಗರದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿ (ಮೊ.ಸಂ 7022054512)ಗೆ ಜುಲೈ 8ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.