ಜಿಲ್ಲೆ

ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ನಗರಸಭೆ ವ್ಯಾಪ್ತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1) ರ ಅನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆಸ್ತಿ ತೆರಿಗೆ ಪಾವತಿ ಮಾಡಿ ಶೇ. 5ರಷ್ಟು ರಿಯಾಯಿತಿಯನ್ನು ನೀಡಲು ಕಲ್ಪಿಸಿರುವ ಅವಕಾಶವನ್ನು ಚಾಮರಾಜನಗರ ನಗರಸಭಾ ವ್ಯಾಪ್ತಿಯ ಜನತೆ ಸದುಪಯೋಗ ಮಾಡಿಕೊಂಡು ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.