ಜಿಲ್ಲೆ

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಅರ್ಜಿ ಆಹ್ವಾನ

ಎ.ಎಸ್.ಮಣಿಕಂಠ

ಚಾಮರಾಜನಗರ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತಕೋತರ ಪದವಿಯವರೆಗೆ ಹಾಗೂ ವೈದ್ಯಕೀಯ/ಎಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಮತ್ತು ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ 45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022, ಇವರನ್ನು ಖುದ್ದಾಗಿ ಅಥವಾ ದೂರವಾಣಿ 080-23475188, 8277291175, 8277120505 ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.