ಜಿಲ್ಲೆ

ಸುಧಾರಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ಸರಬರಾಜು ಕಾರ್ಯಕ್ರಮದಡಿ ಗಾರೆಕೆಲಸ ಮತ್ತು ಮರಗೆಲಸದ ಪವರ್ ಕಟಿಂಗ್ ಮಷಿನ್ ಸುಧಾರಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ (ಬಿ.ಪಿ.ಎಲ್), ಅಂಗವಿಕಲರಿದ್ದಲ್ಲಿ (ಅಂಗವಿಕಲರ ಪ್ರಮಾಣ ಪತ್ರ), ಗಾರೆಕೆಲಸ, ಮರಗೆಲಸದ ಕಸುಬಿನ ಕುಶಲಕರ್ಮಿಗಳಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಥವಾ ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರಗಳನ್ನು ಪಿಡಿಎಫ್ ಫೈಲ್‌ನಲ್ಲಿ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಅರ್ಜಿಯನ್ನು ಜು.26ರ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳು ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.