ಜಿಲ್ಲೆ

ಸಿಎಂಗೆ ಸಚಿವರ ಮನವಿ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ಸೌಲಭ್ಯ ಕಲ್ಪಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರ ಬಳಿ ಕೇಳಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಆಯೋಜಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೃತಜ್ಞತಾ ಸಭೆ ಅವರು ಮಾತನಾಡಿದರು. ನಮ್ಮ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಸೋಲಾರ್ ಮೂಲಕ ವಿದ್ಯುತ್ ಸೌಲಭ್ಯ ಕಲ್ಪಿಸುವ ಯೋಜನೆಗೆ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸಲಿದೆ ಎಂದರು.