ಜಿಲ್ಲೆ

ಪಡಿತರ ಫಲಾನುಭವಿಗಳಿಗೆ ನಗದು ಜಮೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಡಿಬಿಟಿ ಮುಖಾಂತರ ನಗದು ಹಣವನ್ನು ಪಾವತಿ ಮಾಡುವ ಸಂಬಂಧ ಚಾಮರಾಜನಗರ ಜಿಲ್ಲೆಯಲ್ಲಿ 2024ರ ಮೇ ತಿಂಗಳ 2,59,816 ಪಡಿತರ ಚೀಟಿದಾರರ (8,09,798 ಫಲಾನುಭವಿಗಳಿಗೆ) ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ 12,94,28,820 ರೂ. ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.