ಜಿಲ್ಲೆ

19, 20ರಂದು ವಿ.ಸೋಮಣ್ಣ ಜಿಲ್ಲಾ ಪ್ರವಾಸ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಜು.19 ಹಾಗೂ 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

19ರಂದು ಸಂಜೆ 5.30ಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಮಲೆಮಹದೇಶ್ವರ ಬೆಟ್ಟದಲ್ಲಿಯೇ ವಾಸ್ತವ್ಯ ಹೂಡುವರು. ಜುಲೈ 20ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.