ಚಾಮರಾಜನಗರ: ತಾಲೂಕಿನ ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಕ್ಲಿಷ್ಟಕರ ಅಂಡಾಶಯ ಗಡ್ಡೆ ಶಸ್ತ್ರಚಿಕಿತ್ಸೆ ನಡೆಸಿ ಸುಮಾರು 3.5 ಕೆ.ಜಿ. ಗಡ್ಡೆಯನ್ನು ಹೊರತೆಗೆದಿದ್ದಾರೆ. ಎರಡು ವರ್ಷಗಳಿಂದ ಕ್ಲಿಷ್ಟಕರ ಅಂಡಾಶಯದ ಗಡ್ಡೆಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ತಪಾಸಣೆ ಮಾಡಿಸಿಕೊಂಡಿದ್ದರು. ಬಳಿಕ ಡಾ.ನಾರಾಯಣ ಅವರು ಬುಧವಾರ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿ ಗಡ್ಡೆ ಹೊರ ತೆಗೆದಿದ್ದಾರೆ.
ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ವಿಜಯವಾಣಿ ಜತೆಗೆ ಮಾತನಾಡಿ, ಖಾಸಗಿ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ಆದರೆ ಸಮುದಾಯ ಆರೋಗ್ಯ ಕೇಂದ್ರದಲ್ಲೂ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯರ ಕಾರ್ಯವೈಖರಿ ಮೆಚ್ಚುವಂತಹದ್ದು ಎಂದು ಹೇಳಿದರು.