ಚಾಮರಾಜನಗರ: ಸುಮಾರು 78 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ನಟಿ ಕಲ್ಪನಾ ತಾವು ಅಭಿನಯಿಸಿದ ಎಲ್ಲಾ ಪಾತ್ರಗಳಿಗೂ ಜೀವ ತುಂಬುತ್ತಿದ್ದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಂಸ್ಕೃತಿ ಚಿಂತಕ ಸುರೇಶ್ ಎನ್.ಋಗ್ವೇದಿ ತಿಳಿಸಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ತಾಲೂಕು ಕಸಾಪ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಿನುಗುತಾರೆ ಕಲ್ಪನಾ ಸವಿನೆನಪು ಮತ್ತು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಚಿತ್ರನಟಿ ಕಲ್ಪನಾ ಕನ್ನಡ ಚಲನಚಿತ್ರರಂಗದ ಅಪ್ರತಿಮ, ಅದ್ಭುತ ಪ್ರತಿಭೆ. ತಮ್ಮ ಅಭಿನಯದ ಮೂಲಕ ಕನ್ನಡ ಚಲನಚಿತ್ರ ರಂಗದಲ್ಲಿ ಲಕ್ಷಾಂತರ ಅಭಿಮಾನಿಗಳಲ್ಲಿ ಪ್ರಭಾವ ಬೀರಿದ್ದಾರೆ. ತಮ್ಮ ಪಾತ್ರಗಳಿಗೆ ಜೀವಂತಿಕೆ ತುಂಬಿ ನಟಿಸುತ್ತಿದ್ದ ಕಲ್ಪನಾ ಕನ್ನಡದ ಮರೆಯಲಾಗದ ಮಿನುಗುತಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬರಹಗಾರ ಎಸ್.ಲಕ್ಷ್ಮೀನರಸಿಂಹ, ಕನ್ನಡ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್, ಬಿ.ಕೆ.ಆರಾಧ್ಯ, ಸರಸ್ವತಿ, ಶಿವಲಿಂಗ ಮೂರ್ತಿ, ಪಣ್ಯದ ಹುಂಡಿ ರಾಜು, ಸುರೇಶ್ ಗೌಡ, ಬೊಮ್ಮಾಯಿ, ಗೋವಿಂದರಾಜು, ಮಾದೇವಸ್ವಾಮಿ ,ಪರಮೇಶ್ವರಪ್ಪ, ಸತೀಶ್, ಮಹದೇವು ಹಾಗೂ ಇತರರು ಹಾಜರಿದ್ದರು.