ಚಾಮರಾಜನಗರ: ಕರ್ನಾಟಕ ರಕ್ಷಣಾ ವೇದಿಕ (ನಾರಾಯಣಗೌಡ ಬಣ) ಗುಂಡ್ಲುಪೇಟೆ ತಾಲೂಕು ಹಾಗೂ ಟೌನ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ನವೀನ್‌ಕುಮಾರ್ ಹೇಳಿದರು.
ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾಗಿ ರಮೇಶ್ ನಾಯಕ, ಉಪಾಧ್ಯಕ್ಷರಾಗಿ ಕಾರ್ತಿಕ್, ಟೌನ್ ಅಧ್ಯಕ್ಷರಾಗಿ ರಾಜೇಂದ್ರ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವರನ್ನು ಸ್ಥಳೀಯ ಪದಾಧಿಕಾರಿಗಳು, ಸದಸ್ಯರ ಸೂಚನೆ ಮೇರೆಗೆ ನೇಮಕ ಮಾಡಲಾಗಿದೆ. ನೂತನ ಪದಾಧಿಕಾರಿಗಳು ಕರವೇ ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ತಾಲೂಕು ಅಧ್ಯಕ್ಷರಾಗಿದ್ದ ಸುರೇಶ್ ನಾಯಕ ವೇದಿಕೆಯ ಸಂಘಟನೆ ಮಾಡುವಲ್ಲಿ ವಿಫಲರಾಗಿದ್ದು, ರಾಜ್ಯಾಧ್ಯಕ್ಷ ನಾರಾಯಣಗೌಡರ ಆದೇಶದ ಮೇರೆಗೆ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸುರೇಶ್‌ನಾಯಕ ಅವರು ಕರವೇ ಹೆಸರು ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮಂಜೇಶ್, ಪ್ರಧಾನ ಕಾರ್ಯದರ್ಶಿ ಅನಂತ್‌ನಾಗ್, ಗುಂಡ್ಲುಪೇಟೆ ಅಧ್ಯಕ್ಷ ರಮೇಶ್‌ನಾಯಕ, ಉಪಾಧ್ಯಕ್ಷ ಕಾರ್ತಿಕ್, ಟೌನ್ ಅಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷ ಕೃಷ್ಣಪ್ಪ ಹಾಜರಿದ್ದರು.