ಚಾಮರಾಜನಗರ: ಕ್ರೀಡೆಯ ಪ್ರತಿಯೊಬ್ಬ ವ್ಯಕ್ತಿಯ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಕೆಂಪನಪುರ ಮಹದೇವಸ್ವಾಮಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು.
ತಾಲೂಕಿನ ಕೆಂಪನಪುರ, ಮಂಗಲ, ಅಮಚವಾಡಿ, ಹರವೆ, ನಂಜದೇವನಪುರ ಸರ್ಕಾರಿ ಶಾಲೆಗಳು ತುಂಬಾ ಪ್ರಸಿದ್ಧಿ ಪಡೆದಿವೆ. ಶಿಕ್ಷಕರು ಕೂಡ ಶ್ರಮವಹಿಸಿ ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಕೊಡಲು ಶ್ರಮಿಸುತ್ತಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಸಿಗತ್ತಿದೆ ಎಂದರು.
ಈ ವೇಳೆ ಕೆಂಪನಪುರ ಗ್ರಾ.ಪಂ ಅಧ್ಯಕ್ಷ ಆರ್.ಮಾದೇಶ್, ಮಂಗಲ ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ.ಸದಸ್ಯ ಪ್ರಕಾಶ್, ಕೆಂಪನಪುರ ಪಿಎಸಿಸಿ
ಬ್ಯಾಂಕ್ ಅಧ್ಯಕ್ಷ ಶಿವಶಂಕರಪ್ಪ, ಇಸಿಓ ರೇವಣ್ಣ, ತಾಲೂಕು ನಾಯಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕಣ್ಣೆಗಾಲ ಶಿವಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುಧಾ, ಮುಖ್ಯಶಿಕ್ಷಕ ದಾಸೇಗೌಡ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಶಿವಮಲ್ಲು, ರವಿಕುಮಾರ್, ಶಿವಕುಮಾರ್, ಆನಂದ್, ಸಿದ್ದ ಮಲ್ಲಪ್ಪ ಹಾಗೂ ಇತರರು ಭಾಗವಹಿಸಿದ್ದರು.