ಚಾಮರಾಜನಗರ: ಜಿಲ್ಲಾ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ನಗರದ ಸಂಘದ ಕಚೇರಿ ಅವರಣದಲ್ಲಿ ಗುರುವಾರ ಸಂಘದ ಅಧ್ಯಕ್ಷ ಎನ್.ಶಂಕರ್ ಧ್ವಜಾರೋಹಣ ನೇರವೇರಿಸಿದರು.
ಬಳಿಕ ಮಾತನಾಡಿದ ಅವರು, ಬ್ರಿಟೀಷರು ವ್ಯಾಪಾರಕ್ಕೆಂದು ಬಂದು ಇನ್ನೂರು ವರ್ಷಗಳ ಕಾಲ ನಮ್ಮನ್ನು ದಾಸ್ಯಕ್ಕೆ ತಳ್ಳಿದರು.ಮಹಾತ್ಮಾಗಾಂಧಿ ಅವರು ಯಶಸ್ವಿಯಾಗಿ ಸತ್ಯ, ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟರು.ಅನೇಕ ಮಹನೀಯರ ಹೋರಾಟದ ಫಲವಾಗಿ ಬಂದಿರುವ ಸ್ವಾತಂತ್ರ್ಯವನ್ನು ಜೋಪಾನ ಮಾಡಿ, ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರು ಶ್ರಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಗೌರವ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಬಹಳ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಫಲಾಮೃತ ಎಸ್.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿದರು. ಸಂಘದ ಮಾಜಿ ಅಧ್ಯಕ್ಷ ಎಸ್‌ಆರ್‌ಎಸ್ ಶ್ರೀನಿವಾಸ್, ಎ. ಜಯಸಿಂಹ, ಎಸ್.ಬಾಲಸುಬ್ರಮಣ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.