ಜಿಲ್ಲೆ

ಗ್ರಂಥಾಲಯಗಳು ಜ್ಞಾನದ ಕೇಂದ್ರಗಳು

ಎ.ಎಸ್.ಮಣಿಕಂಠ

ಚಾಮರಾಜನಗರ: ಪ್ರಸ್ತುತ ಆಧುನಿಕ ಮತ್ತು ತಂತ್ರಜ್ಞಾನ ಯುಗದಲ್ಲೂ ಗ್ರಂಥಾಲಯಗಳು ಪರಿಪೂರ್ಣ ಜ್ಞಾನವನ್ನು ನೀಡುವ ಕೇಂದ್ರಗಳಾಗಿವೇ ಎಂದು ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಕೆ.ಸಿ.ಬಸವಣ್ಣ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾರು ಅತಿ ಹೆಚ್ಚು ಸಮಯವನ್ನು ಗ್ರಂಥಾಲಯದಲ್ಲಿ ಕಳೆಯುತ್ತಾರೋ ಅವರು ಶ್ರೇಷ್ಠ ವ್ಯಕ್ತಿಗಳಾಗಿ ಜಗತ್ಪ್ರಸಿದ್ಧಿ ಪಡೆಯುತ್ತಾರೆ. ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಬಹುಪಾಲು ಸಮಯವನ್ನು ಗ್ರಂಥಾಲಯಗಳಲ್ಲಿ ಜ್ಞಾನಾರ್ಜನೆಗಾಗಿ ಕಳೆದಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಎಂ.ಆರ್.ಗಂಗಾಧರ್, ಕುಲಸಚಿವ ಡಾ.ಜಿ.ವಿ.ವೆಂಕಟರಮಣ, ಡಾ.ಸಿದ್ದರಾಜು, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಉಪನ್ಯಾಸಕ ಡಾ.ಎಂ.ಮಹಾದೇವಮೂರ್ತಿ, ಎಂಬಿಎ ವಿಭಾಗದ ಉಪನ್ಯಾಸಕ ಮಹದೇವ್ ಪ್ರಸಾದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.