ಚಾಮರಾಜನಗರ: ಎನ್‌ಎಂಎಂಎಸ್ ಪರೀಕ್ಷೆಯನ್ನು ಡಿ.8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭವಾಗಿದ್ದು, ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಎನ್‌ಎಂಎಂಎಸ್ ಲಾಗಿನ್‌ನಲ್ಲಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿಸಲ್ಲಿಸಲು ಸೆ.5 ಕೊನೆ ದಿನವಾಗಿದೆ. ಮಾಹಿತಿಗೆ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸಬಹುದು ಹಾಗೂ ಕೆಎಸ್‌ಕ್ಯುಎಎಸಿ ಕಚೇರಿ ದೂ.ಸಂ 080-23341615 ಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.