ಚಾಮರಾಜನಗರ: ಸ್ವರ್ಣಗೌರಿ ಹಾಗೂ ಗಣೇಶಚತುರ್ಥಿ ಹಬ್ಬವು ಸಮೀಸುತ್ತಿದ್ದು, ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ತಯಾರಿಸಬಾರದು. ಪಿಒಪಿ, ಬಣ್ಣ ಲೇಪಿತ ವಿಗ್ರಹಗಳನ್ನು ಕೆರೆ, ಇನ್ನಿತರ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಸಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ನಗರಸಭೆ, ಪುರಸಭೆಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.