ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಆ.28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತೀರ್ಥಹಳ್ಳಿ ತಾಲೂಕು ನಿಟ್ಟೂರು ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರ ಸುನೀಲ್ ಬೋಸ್ ಭಾಗವಹಿಸಲಿದ್ದಾರೆ. ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ ಚಮರಂ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.