ಚಾಮರಾಜನಗರ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಸಹಾಯಧನ, ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ) ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯಕ್ಕಾಗಿ ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೆ. 16ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ 080-22252555 ಸಂಪರ್ಕಿಸಬಹುದು ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂ 08226-223587 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.