ಜಿಲ್ಲೆ

ರಾಜ್ಯಪಾಲರ ವಿರುದ್ಧ ದಸಂಸ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಎದುರು ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ. ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ. ಶಿವಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಸುಭದ್ರ ಸರ್ಕಾರ ಆಡಳಿತ ನಡೆಯುತ್ತಿದೆ. ದಲಿತರು, ಹಿಂದುಳಿದ ವರ್ಗಗಳ ಪರ ಅನೇಕ ಯೋಜನೆಗಳನ್ನು ರೂಪಿಸಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಾಮಮಾರ್ಗದಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪಿತೂರಿ ಮಾಡಿದೆ ಎಂದರು.

ಡಿಎಸ್‌ಎಸ್ ಜಿಲ್ಲಾ ಸಂಯೋಜಕ ಕೆ.ಎಂ.ನಾಗರಾಜು, ಜಿಲ್ಲಾ ಸಂಯೋಜಕ ಬೆಳ್ಳಿಯಪ್ಪ, ಆಟೋ ಉಮೇಶ್, ಕೊತ್ತಲವಾಡಿ ಶಿವು, ಯಜಮಾನರಾದ ಮಹದೇವಯ್ಯ, ಮರಿಯಯ್ಯ, ಕಲಾವಿದ ವೆಂಕಟರಮಣ, ರಂಗಸ್ವಾಮಿ, ಚಿನ್ನಸ್ವಾಮಿ, ಚಿಕ್ಕ, ಗೌರಮ್ಮ, ರಾಜಮ್ಮ, ಪುಟ್ಟಬಸಮ್ಮ, ಮಹದೇವಮ್ಮ, ರಾಜಮ್ಮ ಇತರರು ಭಾಗವಹಿಸಿದ್ದರು. ಕೆ.ಎಂ.ನಾಗರಾಜು, ಬೆಳ್ಳಿಯಪ್ಪ, ಆಟೋ ಉಮೇಶ್, ಕೊತ್ತಲವಾಡಿ ಶಿವು, ಮಹದೇವಯ್ಯ ಇತರರು ಭಾಗವಹಿಸಿದ್ದರು.