ಚಾಮರಾಜನಗರ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಸೆ. 19ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್‌ವಿಳಾಸಕ್ಕೆ ಕಳುಹಿಸಬಹುದಾಗಿದೆ.