ಚಾಮರಾಜನಗರ: ತಾಲೂಕಿನ ಸಂತೇಮರಹಳ್ಳಿ ಹಾಗೂ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜೀಪುರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 130 ಗ್ರಾಮಪಂಚಾಯಿತಿಗಳಲ್ಲಿ 196 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 176 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ ಸಂತೇಮರಹಳ್ಳಿ ಹಾಗೂ ತಿಮ್ಮರಾಜೀಪುರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ವೆಬ್‌ಸೈಟ್ ಮೂಲಕ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 9148712473 ಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.