ಜಿಲ್ಲೆ

ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ (ಎಸ್.ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ನೀಡಲಾಗುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ (ಎಸ್.ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳಲ್ಲಿ ಪಡೆದು ಸೆ.17ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಚಾಮರಾಜನಗರ ದೂ.ಸಂ 08226-226070 ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಚಾಮರಾಜನಗರ ತಾಲೂಕು ದೂ.ಸಂ- 08226-223823, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕೊಳ್ಳೇಗಾಲ ತಾಲೂಕು ದೂ.ಸಂ 08224-255060, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಗುಂಡ್ಲುಪೇಟೆ ತಾಲೂಕು ದೂ.ಸಂ 08229-222984, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಯಳಂದೂರು ತಾಲೂಕು ದೂ.ಸಂ 08226-240309 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.