ಚಾಮರಾಜನಗರ: ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.