ಚಾಮರಾಜನಗರ: ಕೊಳ್ಳೇಗಾಲ ನಗರಸಭೆಯು 2024-25ನೇ ಸಾಲಿನ ಶೇ.24.10 ಮತ್ತು ಶೇ.7.25ರ ಎಸ್.ಎಫ್.ಸಿ. ಮುಕ್ತ ನಿಧಿ ಅನುದಾನದ ಅನುಮೋದಿತ ಕ್ರಿಯಾ ಯೋಜನೆಯಂತೆ ವಿವಿಧ ಸೌಲಭ್ಯಗಳಿಗಾಗಿ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಬಿ.ಇ, ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ 2 ಭಾವಚಿತ್ರ, ಬಿ.ಪಿ.ಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್, ಪ್ರಸ್ತಕ ಸಾಲಿನಲ್ಲಿ ಚಾಲ್ತಿಯಾಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವ್ಯಾಸಂಗ ಮಾಡುತ್ತಿರುವ ದೃಢೀಕರಣ ಪತ್ರ, ಕಳೆದ ಸಾಲಿನ ಅಂಕ ಪಟ್ಟಿ ಹಾಗೂ ಸಾಮಾಜ ಕಲ್ಯಾಣ ಇಲಾಖೆ, ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರವರಿಂದ ಲ್ಯಾಪ್ ಟಾಪ್, ಸಹಾಯ ಧನ ಪಡೆದಿಲ್ಲದಿರುವ ಬಗ್ಗೆ ದೃಢೀಕರಣ ಪತ್ರ ಲಗತಿಸಬೇಕು. ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸಬೇಕು. ಅರ್ಜಿಯನ್ನು ಕೊಳ್ಳೇಗಾಲ ನಗರಸಭಾ ಕಚೇರಿಯಿಂದ ಉಚಿತವಾಗಿ ಪಡೆದು ಸೆ. 12 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಾಖೆಯನ್ನು ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.