ಚಾಮರಾಜನಗರ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಡಿ.ಕವಿತಾ ನೇತೃತ್ವದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಾನುವಾರ ಪೋಲಿಸರು ಪಥಸಂಚಲನ ನಡೆಸಿದರು.
ನಗರದ ಜೋಡಿ ರಸ್ತೆ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತ,ಗುಂಡ್ಲುಪೇಟೆ ವೃತ್ತ ಸೇರಿದಂತೆ ಇನ್ನಿತರೆ ರಸ್ತೆಗಳಲ್ಲಿ ಚಾಮರಾಜನಗರ ಪಟ್ಟಣ, ಪೂರ್ವ, ಗ್ರಾಮಾಂತರ ಠಾಣೆ ಮೀಸಲು ಹಾಗೂ ಟ್ರಾಫಿಕ್ ಠಾಣೆ ಪೊಲೀಸರು ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಗಣೇಶ ಹಬ್ಬ ಅದ್ದೂರಿಯಾಗಿ ನೆರವೇರಿಸುವ ತೆಗೆ ಸೌಹಾರ್ದತೆ, ಶಾಂತಿಯಿಂದ ಕೂಡಿರಲಿ ಎಂದು ಎಸ್ಪಿ ಮನವಿ ಮಾಡಿದರು.
7 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ:
ಶ್ರೀವಿದ್ಯಾಗಣಪತಿ ಮಂಡಳಿಯ ವತಿಯಿಂದ 62ನೇ ವಾರ್ಷಿಕೋತ್ಸವದ ಅಂಗವಾಗಿ 7 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುಮಾರು 27 ದಿನಗಳವರಗೆ ಶ್ರೀಅಯೋಧ್ಯೆ ಗಣಪತಿಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ತದ ನಂತರ ಅ.4 ರಂದು ಗಣೇಶಮೂರ್ತಿಯನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗುತ್ತದೆ.