ಯಳಂದೂರು: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕೆ. ಕಾಂತರಾಜು ಅವರಿಗೆ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.
ಕೆ.ಕಾಂತರಾಜು ಮಾತನಾಡಿ, ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎರಡು ವರ್ಷಗಳಿಗಿಂತಲೂ ಹೆಚ್ಚು ಸೇವೆ ಸಲ್ಲಿಸಿದ್ದೇನೆ. ನನ್ನ ಸೇವಾ ಅವಧಿಯಲ್ಲಿ ಇಲ್ಲಿನ ಶಿಕ್ಷಕರು, ಇತರ ಅಧಿಕಾರಿ ವರ್ಗದವರು ಸಂಘ ಸಂಸ್ಥೆಯವರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ನನ್ನ ಅವಧಿಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಮಾಡಲು ನಮ್ಮ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಉತ್ತಮ ಸಹಕಾರ ನೀಡಿದ್ದಾರೆ. ಅಲ್ಲದೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ಪಡೆದದ್ದನ್ನು ನನ್ನ ವೃತ್ತಿ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಬಿಆರ್‌ಸಿ ನಂಜುಂಡಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಶಿಕ್ಷಕರಾದ ರಾಜಮಲ್ಲು, ಸಿ.ಜಯಶಂಕರ, ಆರ್.ಪಿ. ಮಂಜುನಾಥ್, ಸುನೀಲ್, ದೇವು, ವರದರಾಜು, ರಾಜೇಶ್, ಕಿರಣ್, ಮಹದೇವಮ್ಮ, ಶಶಿರೇಖಾ, ಬಸವಣ್ಣ, ಸೆಲಿನಾ ಸೇರಿದಂತೆ ಅನೇಕರು ಇದ್ದರು.