ಜಿಲ್ಲೆ

ಪ.ಪಂ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ:ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ನಡೆಸಲಿದ್ದು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಕಮ್ಮಟ ಏರ್ಪಡಿಸಲು ಉದ್ದೇಶಿಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ 20 ರಿಂದ 45ರ ವಯೋಮಿತಿಯ ಆಸಕ್ತ ಅಭ್ಯರ್ಥಿಗಳು ಕಮ್ಮಟದಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.