ಸಾಂದರ್ಭಿಕ ಚಿತ್ರ 
ಜಿಲ್ಲೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ

ಕಿರಣ್ ಮಾದರಹಳ್ಳಿ

ಚಾಮರಾಜನಗರ: 2023-24ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸೆಪ್ಟೆಂಬರ್ 2023ರ ಶಿಕ್ಷಕರ ದಿನಾಚರಣೆಯಂದು ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಪ್ರಸ್ತಾವನೆಯನ್ನು ಸಲ್ಲಿಸಬಹುದು. ಆಸಕ್ತ ಶಿಕ್ಷಕರು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆ.7 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.