ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವೀಡಿಯೋಗ್ರಫಿ ತರಬೇತಿ ಶಿಬಿರಗಳನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18ರಿಂದ 40 ವರ್ಷದೊಳಗಿನ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ನ.7ರಿಂದ 26ರವರೆಗೆ 20 ದಿನಗಳ ಹೊಲಿಗೆ ತರಬೇತಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ನವೆಂಬರ್ 15ರಿಂದ 26ರವರೆಗೆ 12 ದಿನಗಳ ಕಾಲ ವೀಡಿಯೋಗ್ರಫಿ ತರಬೇತಿಯನ್ನು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನೀಡಲಾಗುತ್ತದೆ.
ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮೊದಲನೇ ಮಹಡಿ ಕೊಠಡಿ ಸಂ 118ರಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಅರ್ಜಿ ಪಡೆದು ಅ.28ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ 08226-224932 ಅಥವಾ ಮೊ.ಸಂ 9916466659 ಅನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.